-->
ಕರಾವಳಿ-ಮಲೆನಾಡು ಪ್ರವಾಸೋಧ್ಯಮ ರಾಯಭಾರಿಯಾಗಿ ವೃಷಬ್ ಶೆಟ್ಟಿ ನೇಮಕ

ಕರಾವಳಿ-ಮಲೆನಾಡು ಪ್ರವಾಸೋಧ್ಯಮ ರಾಯಭಾರಿಯಾಗಿ ವೃಷಬ್ ಶೆಟ್ಟಿ ನೇಮಕ

ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮ 
ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಈ ಕುರಿತು ಹಲವಾರು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನಗಳೊಳಗೆ ಮಂಗಳೂರಿನಲ್ಲಿಯೇ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಭೆಯಲ್ಲಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಈಗಾಗಲೇ ರೂ. 718.63 ಕೋಟಿ ಅಂದಾಜು ಹೂಡಿಕೆಯ 45 ಬೃಹತ್ ಯೋಜನೆಗಳನ್ನು ಅನುಮೋದಿಸಲಾಗಿದೆ. ಇದರಿಂದ 4,500 ಯುವಕರಿಗೆ ಉದ್ಯೋಗ ಸಿಗಲಿದೆ. ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದವರು ಹೇಳಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು. ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ವಿಧಿಸಲಾಗುವ ನಿಯಮಗಳನ್ನು ಸಡಿಲಗೊಳಿಸುವಂತೆ ಮಾಡಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತುಷಾರ್ ಗಿರಿನಾಥ್ ಸೇರಿದಂತೆ ಹಲವಾರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಈ ಕುರಿತು ಹಲವಾರು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನಗಳೊಳಗೆ ಮಂಗಳೂರಿನಲ್ಲಿಯೇ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಭೆಯಲ್ಲಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು. ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ವಿಧಿಸಲಾಗುವ ನಿಯಮಗಳನ್ನು ಸಡಿಲಗೊಳಿಸುವಂತೆ ಮಾಡಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತುಷಾರ್ ಗಿರಿನಾಥ್ ಸೇರಿದಂತೆ ಹಲವಾರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Ads on article

Advertise in articles 1

advertising articles 2

Advertise under the article