-->
ಮೈಸೂರು: ಪಬ್ ಬೆಂಕಿಗಾಹುತಿ; ಇಬ್ಬರು ಸಜೀವ ದಹನ

ಮೈಸೂರು: ಪಬ್ ಬೆಂಕಿಗಾಹುತಿ; ಇಬ್ಬರು ಸಜೀವ ದಹನ


ಸೋಮವಾರ (ಇಂದು) ಅಪರಾಹ್ನ ಮೈಸೂರಿನ ಪಬ್ ಒಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು ಸಾವನ್ನಪ್ಪಿದ್ದು, ಇತರ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಸಾಹಿಲ್ ಮತ್ತು ಪ್ರಕಾಶ್ ಎಂದು ಗುರುತಿಸಲಾಗಿದೆ.

ಈ ಘಟನೆ ಮೈಸೂರಿನ ರಿಂಗ್ ರಸ್ತೆಯಲ್ಲಿ ನಡೆದಿದೆ. ರಿಂಗ್ ರಸ್ತೆ ಬಳಿಯಿರುವ ಫಾಕ್ಸ್​ ಡೆನ್​ ಲಿಕ್ಕರ್​ ಗ್ಯಾರೇಜ್​ ಬಾರ್​ ಅಂಡ್​ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. 

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡ ಸಂದರ್ಭದಲ್ಲಿ ಪಬ್ ನಲ್ಲಿ 25ಕ್ಕೂ ಹೆಚ್ಚು ಜನರಿದ್ದರು. 15 ಜನರನ್ನು ರಕ್ಷಿಸಲಾಗಿದ್ದು 7-8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

Ads on article

Advertise in articles 1

advertising articles 2

Advertise under the article