ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ದಿನ ಕಾರ್ಯಕ್ರಮಕ್ಕೆ ಚಾಲನೆ
Sunday, June 28, 2026
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬ ಮಗುವಿಗೂ ಲಸಿಕೆ ತಲುಪುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಂ. ಎ. ಗಫೂರ್, ಜಿಲ್ಲಾ ಸರ್ಜನ್ ಡಾ. ಅಶೋಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಮಮತಾ ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಉಚಿತ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
