ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಖ್ಯಾತ ಉದ್ಯಮಿ ಅನಂತ್ ಅಂಬಾನಿ
Sunday, June 14, 2026
ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
ಅನಂತ್ ಅಂಬಾನಿ ಅವರು ತಮ್ಮ ಕುಟುಂಬದ ಗುರುಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಹಾಗೂ ದೇವಿಯ ದರ್ಶನ ಕೈಗೊಂಡರು. ದೇವಸ್ಥಾನದ ಸಂಪ್ರದಾಯದಂತೆ ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಅವರು, ಕುಟುಂಬದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಅನಂತ ಅಂಬಾನಿಗೆ ಸಾಂಪ್ರದಾಯಿಕ ಗೌರವಾರ್ಪಣೆ ಮಾಡಲಾಯಿತು. ಈ ವೇಳೆ ದೇವಸ್ಥಾನದ ಅಧಿಕಾರಿಗಳು ಹಾಗೂ ಅರ್ಚಕರು ಅವರನ್ನು ಸ್ವಾಗತಿಸಿ ಪ್ರಸಾದ ನೀಡಿ ಆಶೀರ್ವದಿಸಿದರು.
ಇತ್ತೀಚಿನ ದಿನಗಳಲ್ಲಿ ಅನಂತ ಅಂಬಾನಿ ದೇಶದ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ವಿಶೇಷವಾಗಿ ಕೇರಳ ಸೇರಿದಂತೆ ಹಲವು ರಾಜ್ಯಗಳ ದೇವಾಲಯಗಳಲ್ಲಿ ದರ್ಶನ ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಅವರು ಇದೀಗ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದರು.

