-->
ಕಾರು- ಗ್ಯಾಸ್ ಸಿಲಿಂಡರ್ ಸಾಗಾಟ ಲಾರಿ ಡಿಕ್ಕಿ: ಐದು ಮಂದಿ ಗಂಭೀರ

ಕಾರು- ಗ್ಯಾಸ್ ಸಿಲಿಂಡರ್ ಸಾಗಾಟ ಲಾರಿ ಡಿಕ್ಕಿ: ಐದು ಮಂದಿ ಗಂಭೀರ


ಕಾರು ಮತ್ತು ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಯಾತ್ರಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಎಂಬಲ್ಲಿ ನಡೆದಿದೆ. 

ಕಾರು ಚಾಲಕ ದೀಪಕ್ (45), ಯಾತ್ರಾರ್ಥಿಗಳಾದ ಗುರುರಾಜ್ (46), ಧನುಷ್ (15), ಭಾರತಿ (48) ಹಾಗೂ ಗೀತಾ (55) ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. 

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಕ್ರೆ ನಿವಾಸಿಯಾದ ಕುಟುಂಬವೊಂದರ ಸದಸ್ಯರು ವ್ಯಾಗನರ್ ಕಾರಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡಿದ್ದರು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ, ಎದುರಿನಿಂದ ಬಂದ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸಾಗಿಸುವ ಲಾರಿಯೊಂದು ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ  ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Ads on article

Advertise in articles 1

advertising articles 2

Advertise under the article