-->
 ಶಿರ್ವದ ಕಲ್ಲಟ್ಟು ನದಿ ತೀರದಲ್ಲಿ ಹಸುವಿನ ರುಂಡ ಪತ್ತೆ

ಶಿರ್ವದ ಕಲ್ಲಟ್ಟು ನದಿ ತೀರದಲ್ಲಿ ಹಸುವಿನ ರುಂಡ ಪತ್ತೆ


ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನಿರ್ಜನ ನದಿ ತೀರದ ಪ್ರದೇಶದಲ್ಲಿ ಹಸುವಿನ ರುಂಡ ಪತ್ತೆಯಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ಅನೇಕ ದೇವಾಲಯಗಳ ಪುಣ್ಯ ಸ್ನಾನ ಹಾಗೂ ಜಳಕ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಹಸುವಿನ ತ್ಯಾಜ್ಯವನ್ನು ತಂದು ಎಸೆದಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 


ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ, ಘಟನೆಗೆ ಕಾರಣರಾದವರನ್ನು ಶೀಘ್ರ ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಅವರು, ತಪ್ಪಿತಸ್ಥರನ್ನು ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಮಾಹಿತಿ ಪಡೆದ ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆಯನ್ನೂ ಕೈಗೊಳ್ಳಲಾಯಿತು. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.


Ads on article

Advertise in articles 1

advertising articles 2

Advertise under the article