-->
 ರಸ್ತೆಗೆ ಬಿದ್ದ ಬೃಹತ್ ಮರದ ಗೆಲ್ಲು: ಸ್ಕೂಟಿ ಸವಾರೆಗೆ ಗಾಯ

ರಸ್ತೆಗೆ ಬಿದ್ದ ಬೃಹತ್ ಮರದ ಗೆಲ್ಲು: ಸ್ಕೂಟಿ ಸವಾರೆಗೆ ಗಾಯ


ಬೃಹತ್ ಮರದ ಗೆಲ್ಲೊಂದು ರಸ್ತೆಗೆ ಬಿದ್ದು ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಹೆಬ್ರಿ–ಬ್ರಹ್ಮಾವರ–ಕುಂದಾಪುರ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸ್ಕೂಟಿಗೂ ಹಾನಿಯಾಗಿದೆ.


ಮರದ ಬೃಹತ್ ಗೆಲ್ಲು ರಸ್ತೆ ಮೇಲೆ ಬಿದ್ದ ಪರಿಣಾಮ ರಸ್ತೆ ಬದಿಯ ಐದಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಈ ಭಾಗದ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರ ಕಡಿಮೆಯಿದ್ದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.


ಸ್ಥಳೀಯರ ಪ್ರಕಾರ, ಈ ಮರ ಬಹಳ ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅದನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಘಟನೆಯ ಬಳಿಕ ಸ್ಥಳೀಯರು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ್ದು, ರಸ್ತೆಗೆ ವಾಲಿಕೊಂಡಿರುವ ಅಪಾಯಕಾರಿ ಮರಗಳನ್ನು ತಕ್ಷಣವೇ ಗುರುತಿಸಿ ತೆರವುಗೊಳಿಸುವ ಮೂಲಕ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಂಬಂಧಿಸಿದ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ, ರಸ್ತೆಗೆ ಬಿದ್ದ ಮರದ ಗೆಲ್ಲು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ.  .

Ads on article

Advertise in articles 1

advertising articles 2

Advertise under the article