-->
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ವಿದ್ಯುತ್ ಕಂಬ: ದಂಪತಿ ಪಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ವಿದ್ಯುತ್ ಕಂಬ: ದಂಪತಿ ಪಾರು


ರಸ್ತೆ ಬದಿಯಲ್ಲಿದ್ದ ಮರ ಹಾಗೂ ವಿದ್ಯುತ್ ಕಂಬವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಘಟನೆ 
ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ  ಕಾರು ಜಖಂಗೊಂಡು, ಕಾರಿನಲ್ಲಿದ್ದ ದಂಪತಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ರಸ್ತೆ ಬದಿಯಲ್ಲಿದ್ದ ಮರವೊಂದು ಏಕಾಏಕಿ ವಿದ್ಯುತ್ ಕಂಬದ ಮೇಲೆ ಉರುಳಿದೆ. ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬವೂ ಉರುಳಿ ಬಿದ್ದಿದೆ. ಇದೇ ವೇಳೆ ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

ಘಟನೆಯಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ, ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಆಗಮಿಸಿ, ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನರಾರಂಭಿಸಲಾಯಿತು.

 

Ads on article

Advertise in articles 1

advertising articles 2

Advertise under the article