-->
 ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ


ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ಅಡ್ಡ ಮತದಾನದ ಕುರಿತು ಸತ್ಯಾಸತ್ಯತೆ ತಿಳಿದುಕೊಳ್ಳುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ವಿಜಯೇಂದ್ರ ಅವರು ಮುಂದಾಗಿದ್ದರು. ಆದರೆ ಪಕ್ಷದ ವರಿಷ್ಠರ ಸೂಚನೆಯ ಹಿನ್ನೆಲೆಯಲ್ಲಿ ಆ ಸಭೆಯನ್ನು ಕೈಬಿಡಲಾಯಿತು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ವಿಜಯೇಂದ್ರ ಅವರು ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.


 

Ads on article

Advertise in articles 1

advertising articles 2

Advertise under the article