ಉಡುಪಿ ಪತ್ರಿಕಾ ಭವನದಲ್ಲಿ ಸನ್ಮತಿ ಪತ್ರಿಕೆ ಸಂಚಿಕೆ ಬಿಡುಗಡೆ- ಸಂವಾದ ಕಾರ್ಯಕ್ರಮ
Friday, June 26, 2026
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.
ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು., ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆಯ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡಬೇಕು ಎಂದರು.
ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.
