ಮಗು ಮಾರಾಟ ಪ್ರಕರಣ: ಕಾಮತ್ ನರ್ಸಿಂಗ್ ಹೋಂ ವೈದ್ಯ ಸೇರಿ ಇಬ್ಬರ ಬಂಧನ
Sunday, June 21, 2026
ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್ ನ ವೈದ್ಯ ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಮತ್ ನರ್ಸಿಂಗ್ ಹೋಮ್ ನ ಡಾ. ಸುರೇಂದ್ರ ಹಾಗು ಮಲ್ಪೆ ನೇಜಾರು ನಿವಾಸಿ ಪ್ರಕಾಶ್ ಬಂಧಿತರು. ಸುಬ್ರಹ್ಮಣ್ಯ ನಗರದ ನವಜಾತ ಶಿಶುವೊಂದನ್ನು ಪ್ರಕಾಶ್ ಎಂಬವರಿಗೆ ಮಾರಾಟ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಮಹಿಳಾ ಠಾಣೆಯ ಪೊಲೀಸರು ಸಾಕ್ಷ್ಯಧಾರಗಳ ಆಧಾರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.