ಉಡುಪಿಯ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
Friday, June 26, 2026
ಉಡುಪಿಯ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ನೇತ್ರಾ ಎಚ್., ಯೋಗದ ಮಹತ್ವ ಹಾಗೂ ದೈನಂದಿನ ಜೀವನದಲ್ಲಿ ಅದರ ಅಗತ್ಯತೆಯ ಕುರಿತು ತಿಳಿ ಹೇಳಿದರು. ಯೋಗ ಶಿಕ್ಷಕಿ ಶಿಲ್ಪಾ ಕಿರಣ್ ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳ ಪ್ರದರ್ಶನ ನಡೆಯಿತು. ಶಾಲಾ ಸಂಯೋಜಕರಾದ ಹರೀಶ್ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
"ಆರೋಗ್ಯಕರ ವಯೋವೃದ್ಧಿಗಾಗಿ ಯೋಗ" ಧ್ಯೇಯವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಉತ್ಸಾಹದಿಂದ ಭಾಗವಹಿಸಿದರು.
