-->
ವಿಶ್ವ ಯೋಗ ದಿನ: ಮಲ್ಪೆ ಗಾಂಧಿ ಶತಾಬ್ದಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ

ವಿಶ್ವ ಯೋಗ ದಿನ: ಮಲ್ಪೆ ಗಾಂಧಿ ಶತಾಬ್ದಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ


ವಿಶ್ವ ಯೋಗ ದಿನದ ಅಂಗವಾಗಿ ಮಲ್ಪೆ ಗಾಂಧಿ ಶತಾಬ್ದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರೋಟರಿ ಮಲ್ಪೆ ಕರಾವಳಿ ಇವರ ಜಂಟಿ ಆಶ್ರಯದಲ್ಲಿ ಯೋಗ ತರಬೇತಿ ಶಿಬಿರವು ಶಾಲಾ ಆವರಣದಲ್ಲಿ  ನಡೆಯಿತು.


ಕಾರ್ಯಕ್ರಮದಲ್ಲಿ ಯೋಗ ಗುರು ಸತೀಶ್ ಕುಂದರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು, "ಮನಸ್ಸನ್ನು ಸ್ವಚ್ಛಗೊಳಿಸಿ ಆರೋಗ್ಯಕರ ಜೀವನ ನಡೆಸಲು ಯೋಗಾಸನ ಅತ್ಯಂತ ಸಹಾಯಕವಾಗಿದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅಮೂಲ್ಯ ಸಾಧನೆಯಾಗಿದೆ" ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಾಲಾಡಳಿತ ಮಂಡಳಿಯ ಉಪಾಧ್ಯಕ್ಷರಾದ ಮಂಜುನಾಥ್ ಸಾಲ್ಯಾನ್, ಮುಖ್ಯ ಶಿಕ್ಷಕಿ  ರತ್ನ, ರೋಟರಿ ಮಲ್ಪೆ ಕರಾವಳಿಯ ಅಧ್ಯಕ್ಷರಾದ ಸುರೇಶ್ ಕರ್ಕೇರ, ಕಾರ್ಯದರ್ಶಿ ಯಶೋದಾ ಕೇಶವ್, ಜಿ.ಎಸ್.ಆರ್. ಮಹೇಶ್ ಕುಮಾರ್ ಹಾಗೂ ಗಣೇಶ್ ಕುಂದರ್ ಉಪಸ್ಥಿತರಿದ್ದರು.

ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಸಾಲ್ಯಾನ್ ಅವರು ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕಿ ಪೂರ್ಣಿಮಾ ಅವರು ವಂದನಾರ್ಪಣೆ ಸಲ್ಲಿಸಿದರು. ದೈಹಿಕ ಶಿಕ್ಷಕರಾದ ಪ್ರೇಮಾನಂದ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಯೋಗ ಗುರು ಸತೀಶ್ ಕುಂದರ್ ಅವರು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ತರಬೇತಿ ನೀಡಿ, ಯೋಗದ ಮಹತ್ವವನ್ನು ತಿಳಿಸಿದರು

Ads on article

Advertise in articles 1

advertising articles 2

Advertise under the article