ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ
Saturday, June 13, 2026
ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಬೆಳಗ್ಗೆ ಶ್ರೀಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ ಅವರು ಬಳಿಕ ಪರ್ಯಾಯ ಶಿರೂರು ಮಠಾಧೀಶರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.
