ಉಡುಪಿ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ನಿನ್ನೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಈಮೇಲ್ ಕಳುಹಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ನಗರ ಠಾಣೆಯ ಪೊಲೀಸರು ಹಾಗೂ ಶ್ವಾನ ದಳ ಬೆರಳಚ್ಚು ತಜ್ಞ ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 5 ದಿನಗಳ ಹಿಂದಷ್ಟೇ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪರಿಶೀಲನೆ ನಂತರ ಹುಸಿ ಬಾಂಬ್ ಬೆದರಿಕೆ ಎನ್ನುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದರು. ಇದೀಗ ಮತ್ತೊಮ್ಮೆ ಬೇರೆ ಇ ಮೇಲ್ ಮೂಲಕ ಬೆದರಿಕೆ ಬಂದಿದೆ.