ರಸ್ತೆಬದಿಯ ಮೈಲುಗಲ್ಲು, ಸ್ಕೂಟರ್ ಗೆ ಕಾರು ಡಿಕ್ಕಿ
Monday, June 01, 2026
ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಫಾರೆಸ್ಟ್ ಗೇಟ್ ಬಳಿ ಇಂದು (ಜೂ.1) ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದಿದೆ. ಬಳಿಕ ಅಲ್ಲೇ ಸಮೀಪ ರಸ್ತೆ ಬದಿ ನಿಲ್ಲಿಸಿದ ಇಲೆಕ್ಟ್ರಿಕ್ ಸ್ಕೂಟರ್ ಗೂ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ರಸ್ತೆ ಬದಿ ಮೈಲಿಗಲ್ಲು ಕಿತ್ತು ಬಂದಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಗೊಳ್ಳಿಯ ಮುಹಮ್ಮದ್ ಝೈನ್ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.
ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
