-->
 ಪ್ರಜ್ಞಾಹೀನ ಸ್ಥಿತಿಯಲ್ಲಿ ಅಪರಿಚಿತ ಯುವಕ ಪತ್ತೆ: ಆಸ್ಪತ್ರೆಗೆ ದಾಖಲು

ಪ್ರಜ್ಞಾಹೀನ ಸ್ಥಿತಿಯಲ್ಲಿ ಅಪರಿಚಿತ ಯುವಕ ಪತ್ತೆ: ಆಸ್ಪತ್ರೆಗೆ ದಾಖಲು


ಉಡುಪಿ ನಗರದ ಗೀತಾಂಜಲಿ ಬಟ್ಟೆ ಮಳಿಗೆಯ ಸಮೀಪ ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಯುವಕ ಮಾತನಾಡುವ ಸ್ಥಿತಿಯಲ್ಲಿ ಇಲ್ಲದ ಕಾರಣ ಆತನ ಹೆಸರು, ವಿಳಾಸ ಹಾಗೂ ಇತರ ವೈಯಕ್ತಿಕ ಮಾಹಿತಿ ಇನ್ನೂ ತಿಳಿದುಬಂದಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಯುವಕನ ಜೇಬಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕಿನ ಎಟಿಎಂ ಕಾರ್ಡ್ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಆತನ ಗುರುತು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಸಂಬಂಧಿಕರು ಅಥವಾ ಯುವಕನ ಕುರಿತು ಮಾಹಿತಿ ಇರುವವರು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಯುವಕನ ವಾರಸುದಾರರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article