ಬಾರ್ಯ–ತೆಕ್ಕಾರು ಗ್ರಾ.ಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ನಿಧನ
Tuesday, June 16, 2026
ಬೆಳ್ತಂಗಡಿ ತಾಲೂಕಿನ ಬಾರ್ಯ ಹಾಗೂ ತೆಕ್ಕಾರು ಗ್ರಾಮ ಪಂಚಾಯತ್‌ಗಳ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಕೀರ್ತಿ ಹೆಚ್.ಬಿ. ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದ ಅವರು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಸೇವೆ ಸಲ್ಲಿಸಿದ್ದ ಜಯಕೀರ್ತಿ ಹೆಚ್.ಬಿ. ಅವರು ತಮ್ಮ ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು ಜನಸ್ನೇಹಿ ಕಾರ್ಯವೈಖರಿಯಿಂದ ಜನಪ್ರಿಯರಾಗಿದ್ದರು. ಅಲ್ಲದೆ, ಮಾಜಿ ಶಾಸಕ ವಸಂತ ಬಂಗೇರ ಅವರ ಆಪ್ತ ಕಾರ್ಯದರ್ಶಿಯಾಗಿ ಸಹ ಕಾರ್ಯನಿರ್ವಹಿಸಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದು, ಅವರ ನಿಧನಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.