-->
 ಉದ್ಯಾವರ ಸ.ಪ.ಪೂ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ, ಸಮವಸ್ತ್ರ ವಿತರಣೆ

ಉದ್ಯಾವರ ಸ.ಪ.ಪೂ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ, ಸಮವಸ್ತ್ರ ವಿತರಣೆ


ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಇಂದು ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಜಯ್ ಕುಮಾರ್, ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಿತೇಂದ್ರ ಶೆಟ್ಟಿ, ಉಡುಪಿ ಟೆಂಪಲ್ ಸಿಟಿ ಲೀಜನ್‌ನ ಸುಶೀಲ್ ಕುಮಾರ್, ಚಿತ್ರಕುಮಾರ್, ಬಿಲ್ಲವ ಸಂಘದ ಯೋಗೇಶ್ ಕೋಟ್ಯಾನ್, ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 

Ads on article

Advertise in articles 1

advertising articles 2

Advertise under the article