-->
ರೌಡಿ ಆಸಾಮಿ ಚರಣ್ ರಾಜ್ ಗೂಂಡಾ ಕಾಯ್ದೆಯಡಿ ಬಂಧನ

ರೌಡಿ ಆಸಾಮಿ ಚರಣ್ ರಾಜ್ ಗೂಂಡಾ ಕಾಯ್ದೆಯಡಿ ಬಂಧನ


ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಆಸಾಮಿ ಚರಣ್ ರಾಜ್ (29) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಚರಣ್ ರಾಜ್, ಬಂಟ್ವಾಳ ತಾಲ್ಲೂಕು ಪುದು ಗ್ರಾಮ ಕುಮ್ದೇಲ್ ನಿವಾಸಿಯಾಗಿದ್ದು, ಈತನ ವಿರುದ್ಧ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದೆ.

ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದದ್ದು, ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ, ಸುರತ್ಕಲ್, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲಿನ ದೌರ್ಜನ್ಯ, ಮಾದಕ ದ್ರವ್ಯ ಸೇವನೆ, ಮಾದಕ ದ್ರವ್ಯ ಸಾಗಾಟ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ದಾಖಲಾದ ಪ್ರಕರಣಗಳಲ್ಲಿ 3 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, 2 ಪ್ರಕರಣಗಳಲ್ಲಿ ಆರೋಪಿಯು ಖುಲಾಸೆಗೊಂಡಿದ್ದಾನೆ. 4 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದ್ದು, 1 ಪ್ರಕರಣ ತನಿಖೆಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

Advertise in articles 1

advertising articles 2

Advertise under the article