ಹಿರಿಯ ನಿರ್ಮಾಪಕ ಬಾಮಾ ಹರೀಶ್ ಪುತ್ರ ಉಲ್ಲಾಸ್ ಹೃದಯಾಘಾತದಿಂದ ನಿಧನ
Saturday, June 27, 2026
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್‌ನ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಅವರ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿ ಬೆಟ್ಟಕ್ಕೆ ಇಂದು ಬೆಳಿಗ್ಗೆ ಸ್ನೇಹಿತನೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಉಲ್ಲಾಸ್ ಅವರಿಗೆ ಸುಮಾರು ಬೆಳಿಗ್ಗೆ 10 ಗಂಟೆ ವೇಳೆಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲೇ ಅವರ ಆರೋಗ್ಯದಲ್ಲಿ ತೀವ್ರ ಕುಸಿತ ಕಂಡ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.