-->
 ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ


ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು. 

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿಯುತ ನಾಗರಿಕತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಚುನಾವಣೆಯನ್ನು ಆಯೋಜಿಸಲಾಗಿತ್ತು. "Be Smart and Do Your Part - Vote Wisely" ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದರು.

ಐದನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮತದಾನ ಮಾಡಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. 

ಶಾಲೆಯ ಪ್ರಾಂಶುಪಾಲರಾದ ನೇತ್ರಾ ಎಚ್ ಅವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಕರ ಸಕ್ರಿಯ ಸಹಭಾಗಿತ್ವದೊಂದಿಗೆ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಚುನಾವಣೆಯ ವಿವಿಧ ಹಂತಗಳಲ್ಲಿ ಶಿಕ್ಷಕರು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ, ಮತದಾನ ಪ್ರಕ್ರಿಯೆಯು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಂಡರು. ಆಡಳಿತಾಧಿಕಾರಿ ಹರೀಶ್ ನಾಯಕ್ ಹಾಗೂ ಶಿಕ್ಷಕರ ಮಾರ್ಗದರ್ಶನ ನೀಡಿದರು. 

Ads on article

Advertise in articles 1

advertising articles 2

Advertise under the article