-->
ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸ್ ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸ್ ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ


ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  

ಸೂರಜ್ ಹೆಗ್ಡೆ ಅವರು ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದು, ಪಕ್ಷದ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರ ಮೊಮ್ಮಗ. 

ಸೂರಜ್ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

Ads on article

Advertise in articles 1

advertising articles 2

Advertise under the article