-->
ಪುಸ್ತಕ ಪ್ರಶಸ್ತಿ ಪುರಸ್ಕೃತ ಕೆರೆಮನೆ ಶಿವಾನಂದ ಹೆಗಡೆ ಅವರಿಗೆ ಗೌರವ ಸನ್ಮಾನ

ಪುಸ್ತಕ ಪ್ರಶಸ್ತಿ ಪುರಸ್ಕೃತ ಕೆರೆಮನೆ ಶಿವಾನಂದ ಹೆಗಡೆ ಅವರಿಗೆ ಗೌರವ ಸನ್ಮಾನ


ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಅಂಬಲಪಾಡಿ ಶ್ರೀ ಜನಾರ್ದನ ಹಾಗೂ ಮಹಾಕಾಳಿ ದೇವಸ್ಥಾನ ಇವರ ಸಹಯೋಗದಲ್ಲಿ 2024ನೇ ಸಾಲಿನ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕೆರೆಮನೆ ಶಿವಾನಂದ ಹೆಗಡೆ ಗುಣವಂತೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. 

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ರಿಜಿಸ್ಟ್ರಾರ್ ನಮ್ರತಾ ಎನ್ ಹಾಗೂ ಸದಸ್ಯರಾದ ರಾಘವ ಎಚ್., ಕೊಪ್ಪಲ ಮೋಹನ ಕದ್ರಿ, ಪೃಥ್ವಿ ರಾಜೇಶ್ ಕುಮಾರ್, ಪುಟ್ಟಸ್ವಾಮಿ ಎ.ಆರ್. ಮತ್ತು ವಿದ್ಯಾಧರ ವೆಂಕಟೇಶ್ ಜಲವಳ್ಳಿ ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ರಾಘವ ಎಚ್ ಕಾರ್ಯಕ್ರಮ ನಿರೂಪಿಸಿದರು. 

Ads on article

Advertise in articles 1

advertising articles 2

Advertise under the article