-->
ಅಕ್ರಮ ಶಿಶು ಮಾರಾಟ ಪ್ರಕರಣ: ಮತ್ತಿಬ್ಬರ ಬಂಧನ

ಅಕ್ರಮ ಶಿಶು ಮಾರಾಟ ಪ್ರಕರಣ: ಮತ್ತಿಬ್ಬರ ಬಂಧನ


ಉಡುಪಿಯಲ್ಲಿ ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಮಗುವನ್ನು ನೀಡಿದ ಕಾರ್ಕಳ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆ ನಿವಾಸಿ ಸುಪ್ರೀತಿ (22) ಬಂಧಿತರು. ಇವರಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಗಾಗಲೇ ಉಡುಪಿ ಕಾಮತ್ ನರ್ಸಿಂಗ್ ಹೋಂ ವೈದ್ಯ ಡಾ. ಸುರೇಂದ್ರ ಕಾಮತ್ ಹಾಗೂ ಮಗು ಪಡೆದ ನೇಜಾರು ನಿವಾಸಿ ಪ್ರಕಾಶ್ ಎಂಬವರನ್ನು ಪೊಲೀಸರು ಬಂಧಿಸಿದ್ದರು.

Ads on article

Advertise in articles 1

advertising articles 2

Advertise under the article