-->
ನಾಳೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ನಾಳೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ


ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸರ್ವಧರ್ಮದ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಾ ಮಾಡಲಿದಾರೆ. ಈಗಾಗಲೇ ಎಲ್ಲಾ ಧರ್ಮ ಹಾಗೂ ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದ್ದು, ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದಾರೆ.

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು, ತುಮಕೂರು ಶ್ರೀಸಿದ್ಧಗಂಗಾಮಠ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠದ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು,  ಶಿರಾ ಪಟ್ಟನಾಯಕನಹಳ್ಳಿ ಗುರು ಬೃಹ್ಮೇಶ್ವರಮಠ ಶ್ರೀ ನಂಜಾವಧೂತ ಮಹಾಸ್ವಾಮಿಗಳು, ಕಾಡ ಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು,  ಸಿರಿಗೆರೆ ಬೃಹನ್ಮಠ ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಶ್ರೀ ವಚನಾನಂದ ಮಹಾಸ್ವಾಮಿಗಳು, ರಂಭಾಪುರ ಪೀಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ಕೇದಾರಪೀಠ ಶ್ರೀ ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚೆನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ನಿರಂಜನಾನಂದಪುರಿ ಸ್ವಾಮೀಜಿ , ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,  ಶ್ರೀ ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು,  ಶ್ರೀ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ, ಶ್ರೀ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು,  ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು, ಕ್ಯಾಥಲಿಕ್ ಚರ್ಚ್ ನ  ಆರ್ಚಬಿಷಪ್ ಡಾ.ಪೀಟರ್ ಮಚಾಡೋ, ಕಲಬುರ್ಗಿ  ದರ್ಗಾ ಹಜರತ್ ಖ್ವಾಜಾ ಬಂದೆನವಾಜ್ ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್  ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. 

Ads on article

Advertise in articles 1

advertising articles 2

Advertise under the article