-->
ಮಣಿಪಾಲ: ಪೆಸ್ಟ್ ಕಂಟ್ರೋಲ್ ಸಂಸ್ಥೆ ಉದ್ಯೋಗಿ ಆತ್ಮಹತ್ಯೆ

ಮಣಿಪಾಲ: ಪೆಸ್ಟ್ ಕಂಟ್ರೋಲ್ ಸಂಸ್ಥೆ ಉದ್ಯೋಗಿ ಆತ್ಮಹತ್ಯೆ


ಪೆಸ್ಟ್ ಕಂಟ್ರೋಲ್ ಸಂಸ್ಥೆಯ ಉದ್ಯೋಗಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತರನ್ನು ಅರುಣ್ ಶೆಟ್ಟಿಗಾರ್ (40) ಎಂದು ಗುರುತಿಸಲಾಗಿದೆ. ಅವರು ಕೆಲಸ ಮಾಡುತ್ತಿದ್ದ ಪೆಸ್ಟ್ ಕಂಟ್ರೋಲ್ ಸಂಸ್ಥೆಯ ಗೋಡೌನ್‌ನಲ್ಲಿರುವ ಪ್ಯಾನ್‌ನ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಮೃತರ ಸಂಬಂಧಿ ಆತ್ರಾಡಿ ನಿವಾಸಿ ಲೋಲಾಕ್ಷಿ ಶೆಟ್ಟಿಗಾರ್ ನೀಡಿದ ಮಾಹಿತಿಯಂತೆ, ಅರುಣ್ ಶೆಟ್ಟಿಗಾರ್ ಅವರು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article