-->
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ


ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇನ್ಸ್ಪಾಯರ್ (INSPIRE) ಯೋಜನೆಯ ಸಮುದಾಯ ವಿಭಾಗದ ತಂಡವು ಇಕೋ ಕ್ಲಬ್‌ನ ಸಹಯೋಗದೊಂದಿಗೆ  ಲೋಂಬರ್ಡ್ ಮೆಮೋರಿಯಲ್ ಆಸ್ಪತ್ರೆ ಆವರಣದಲ್ಲಿ “ಪ್ರಕೃತಿಯಿಂದ ಪ್ರೇರಿತವಾಗಿ, ಹವಾಮಾನಕ್ಕಾಗಿ, ಭವಿಷ್ಯಕ್ಕಾಗಿ” ಎಂಬ ಜಾಗತಿಕ ಧ್ಯೇಯವಾಕ್ಯದಡಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ, ಆವರಣದ ವಿವಿಧ ಪ್ರದೇಶಗಳಲ್ಲಿ ಬಿದ್ದಿದ್ದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿದರು. ಸಂಗ್ರಹಿಸಿದ ತ್ಯಾಜ್ಯ ವಸ್ತುಗಳನ್ನು ಬಳಸಿಕೊಂಡು ಸೃಜನಾತ್ಮಕವಾದ ಪ್ಲಾಸ್ಟಿಕ್ ಮರದ ಶಿಲ್ಪವನ್ನು ನಿರ್ಮಿಸಲಾಯಿತು. ಇಕೋ ಕ್ಲಬ್ ಅಧ್ಯಕ್ಷರು ಈ ಶಿಲ್ಪದ ಮಹತ್ವವನ್ನು ವಿವರಿಸಿ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಸುಸ್ಥಿರ ಜೀವನಶೈಲಿಯ ಅಗತ್ಯತೆಯನ್ನು ಪ್ರತಿಬಿಂಬಿಸುವ ಸಂಕೇತವಾಗಿ ಇದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸುಶೀಲ್ ಜತ್ತನ್ನ ಅವರು  ಅತಿಥಿಯಾಗಿ ಭಾಗವಹಿಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. 

ಈ ಸಂದರ್ಭದಲ್ಲಿ ವಿಷನ್ ಆಸ್ಪತ್ರೆಯ ಚಾಪ್ಲಿನ್ ರೆ. ರೈಚಲ್ ಡಿಸಿಲ್ವಾ ಮಾತನಾಡಿ, “ದೇವರಿಂದ ಸೃಷ್ಟಿಸಲ್ಪಟ್ಟ ಪ್ರಕೃತಿಯನ್ನು ಹಾಳು ಮಾಡದೆ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು. ಖ್ಯಾತ ಛಾಯಾಗ್ರಾಹಕರಾದ ಜನಾರ್ಧನ್ ಕೊಡವೂರು ಹಾಗೂ ರಾಘವೇಂದ್ರ ಪ್ರಭು ಕರ್ವಾಲ್ ಅವರು ತೀರ್ಪುಗಾರರಾಗಿ ಸಹಕರಿಸಿದರು.

Ads on article

Advertise in articles 1

advertising articles 2

Advertise under the article