-->
 ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ


ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಎಸ್‌ಐಆರ್ (SIR) ಅಭಿಯಾನಕ್ಕೆ ವಿಧಿವತ್ತಾಗಿ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು.

ಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದರ ಉದ್ದೇಶವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶ್ರೀಕೃಷ್ಣ ಮಠದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article