ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: ದಂಪತಿ ಪಾರು
Friday, June 05, 2026
ಮಂಗಳೂರು–ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ದಂಪತಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಅವರು ಗಂಭೀರ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಅಗತ್ಯ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಪಘಾತದ ಪರಿಣಾಮ ಕಾರಿಗೆ ಹಾನಿಯಾಗಿದೆ.