-->
ಕಟ್ಟಡದಿಂದ ಆಯತಪ್ಪಿ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಾವು

ಕಟ್ಟಡದಿಂದ ಆಯತಪ್ಪಿ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಾವು


ಮಂಗಳೂರು ಸಮೀಪದ ಪದವಿನಂಗಡಿಯ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ (45) ಮೃತಪಟ್ಟ ದುರ್ಘಟನೆ ನಡೆದಿದೆ.

ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದ ಸಂತೋಷ್ ಪೂಜಾರಿ, ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸಕ್ರಿಯ ಸದಸ್ಯರಾಗಿದ್ದು, ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

ಪದವಿನಂಗಡಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದಾಗ ಸಂತೋಷ್ ಅವರು ಆಕಸ್ಮಿಕವಾಗಿ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಪರಿಣಾಮವಾಗಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಸಂತೋಷ್ ಪೂಜಾರಿ ಈ ಹಿಂದೆ ವಿದೇಶದಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದರು. ಬಳಿಕ ಊರಿಗೆ ಮರಳಿದ ಅವರು ಉಳ್ಳಾಲ ಬೈಲಿನಲ್ಲಿ ಸ್ವಂತ ವೆಲ್ಡಿಂಗ್ ಅಂಗಡಿಯನ್ನು ಆರಂಭಿಸಿ ಜೀವನೋಪಾಯ ನಡೆಸುತ್ತಿದ್ದರು.

ಮೃತ ಸಂತೋಷ್ ಪೂಜಾರಿ ಅವರು ಪತ್ನಿಯನ್ನು ಅಗಲಿದ್ದಾರೆ. ಅವರ ಪತ್ನಿ ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. 

Ads on article

Advertise in articles 1

advertising articles 2

Advertise under the article