ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ
Saturday, June 27, 2026
ಉಡುಪಿಯ ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಗೆ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.