-->
 ಮಜೂರು ಗ್ರಾಮ ಪಂಚಾಯತ್‌ನಲ್ಲಿ ‘ಸಸಿ ವಿತರಣಾ ಕಾರ್ಯಕ್ರಮ’ಕ್ಕೆ ಚಾಲನೆ

ಮಜೂರು ಗ್ರಾಮ ಪಂಚಾಯತ್‌ನಲ್ಲಿ ‘ಸಸಿ ವಿತರಣಾ ಕಾರ್ಯಕ್ರಮ’ಕ್ಕೆ ಚಾಲನೆ


ಕಾಪುವಿನ ಮಜೂರು ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿರುವ ‘ಹಸಿರೇ ಉಸಿರು’ ಕಾರ್ಯಕ್ರಮದ ಅಂಗವಾಗಿ ಇಂದು ಮಜೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ‘ಸಸಿ ವಿತರಣಾ ಕಾರ್ಯಕ್ರಮ’ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸುವ ಅಗತ್ಯತೆಯ ಕುರಿತು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮಾಜಿ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಐ.ಎಸ್.ಪಿ.ಆರ್.ಎಲ್. ಸಂಸ್ಥೆಯ ಯುವರಾಜ್ ಹಾಗೂ ಪ್ರಸನ್ನ, ಆಡಳಿತಾಧಿಕಾರಿ ವರುಣ್ ಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ ಹಾಗೂ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಉಪಸ್ಥಿತರಿದ್ದರು.

‘ಹಸಿರೇ ಉಸಿರು’ ಕಾರ್ಯಕ್ರಮದಡಿ ಗ್ರಾಮದಲ್ಲಿ ಹಸಿರು ವಾತಾವರಣ ಹೆಚ್ಚಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿ ಭಾಗವಹಿಸಿದರು. 

Ads on article

Advertise in articles 1

advertising articles 2

Advertise under the article