ಮಹಿಳೆ ನಾಪತ್ತೆ: ದೂರು ದಾಖಲು
Saturday, June 13, 2026
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರಿಪಳ್ಳದ ರೆಡ್ ಬ್ರಿಕ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿದೆ.
ಸರಿಪಳ್ಳದ ರೆಡ್ ಬ್ರಿಕ್ಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂ.218ರಲ್ಲಿ ವಾಸವಾಗಿರುವ ಜಗದೀಶ್ ಅವರ ಪತ್ನಿ ವಿನಯ (40) ಅವರು 2026ರ ಮೇ 12ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಮನೆಯಿಂದ ತೆರಳಿದ್ದು, ಬಳಿಕ ಇದುವರೆಗೆ ಮನೆಗೆ ಮರಳಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2026ರಡಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಾಪತ್ತೆಯಾಗಿರುವ ವಿನಯ ಅವರ ಬಗ್ಗೆ ಯಾವುದೇ ಸುಳಿವು ಅಥವಾ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. 0824-2220535, 9480805330, 9480802343 ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.