ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
Saturday, June 13, 2026
ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಈ ವೇಳೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ , ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
.jpeg)
