ಲಾರಿ- ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು
Monday, June 22, 2026
ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ದುರ್ಘಟನೆ ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ–66ರ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದೆ.
ಮೃತರನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾನತ್ತೂರು ನಿವಾಸಿ ಸುಧೀಶ್ ಸಿ.ಕೆ. (26) ಎಂದು ಗುರುತಿಸಲಾಗಿದೆ. ಅವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಭಾನುವಾರ ಬೆಳಿಗ್ಗೆ ತಮ್ಮ ಮನೆಯಿಂದ ಕೆಲಸದ ನಿಮಿತ್ತ ಮಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎಕ್ಕೂರು ರೈಲ್ವೆ ಮೇಲ್ಸೇತುವೆಯ ಬಳಿ ಅಪಘಾತ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವದಿಂದ ಮೃತಪಟ್ಟಿದ್ದಾರೆ.