ಕೊಡವೂರು ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ
Monday, June 15, 2026
ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೂನ್ 12ರಂದು ಬೆಳಿಗ್ಗೆ 8ಗಂಟೆಗೆ ವೆಂಕಟ ಕೃಷ್ಣ ಅವರು ಕೊಡವೂರು ಕೆರೆಕಟ್ಟೆ ಗಣಪತಿ ದೇವಸ್ಥಾನದಿಂದ ಹೊರಟಿದ್ದರು. ಬಳಿಕ ಅವರು ಶಂಕರನಾರಾಯಣ ದೇವಸ್ಥಾನಕ್ಕೂ ಬಾರದೇ ತಮ್ಮ ಮನೆಗೂ ಮರುಳದೆ ನಾಪತ್ತೆಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.