ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ನಿಧನ
Monday, June 15, 2026
ಕನ್ನಡದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು.
ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಇವರು ಖ್ಯಾತ ಪತ್ರಕರ್ತೆ ಮತ್ತು ಚಿಂತಕಿ ದಿವಂಗತ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿ.ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.