-->
ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ

ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ


ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಶ್ರೀನಿವಾಸ ಸಿರಾಯನ್ (56) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ (38) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಶ್ರೀನಿವಾಸ ಸಿರಾಯನ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ 6ನೇ ಜೆಎಂಎಫ್‌ಸಿ ನ್ಯಾಯಾಲಯ ಹಲವು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರೂ, ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಕದ್ರಿ ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Ads on article

Advertise in articles 1

advertising articles 2

Advertise under the article