-->
ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ


ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಆರೋಪದಡಿ  ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

 ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆ ನಡೆಸಲಾಗಿದೆ. 

ಆರೋಪಿಯಿಂದ 1 ಗ್ರಾಂ 03 ಮಿಲಿಗ್ರಾಂ ಎಂ.ಡಿ.ಎಂ.ಎ., ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಒಂದು ಸ್ಕೂಟರ್ ಸೇರಿದಂತೆ ಒಟ್ಟು 1,52,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article