ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜಿನಾಮೆ
Friday, June 05, 2026
ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಖಾತೆಗೆ ಮೊದಲಿನಿಂದಲೂ ಪಟ್ಟು ಹಿಡಿದಿದ್ದ ರಾಮಲಿಂಗಾರೆಡ್ಡಿ ಅವರು, ಮುಖ್ಯಮಂತ್ರಿಗಳ ಕೊಠಡಿಯಲ್ಲೇ ಡಿಕೆಶಿ ಎದುರು ತೀವ್ರ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.