-->
ಉಡುಪಿ ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ

ಉಡುಪಿ ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ


ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಿಸುವ ಕಾರ್ಯಕ್ರಮವು ನಡೆಯಿತು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ  ಕುತ್ಯಾರ್ ನವೀನ್ ಶೆಟ್ಟಿ ಅವರು ಉಪಸ್ಥಿತರಿದ್ದು, ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಪರಿಚಯವನ್ನು ಮಾಡಿಕೊಂಡ ನಂತರ ನಿಯುಕ್ತಿ ಪತ್ರಗಳನ್ನು ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಭುಜಂಗ ನಾಯ್ಕ್ ಅವರು, ತಮ್ಮನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾ ಅಧ್ಯಕ್ಷರಿಗೆ ಧನ್ಯವಾದಗಳನ್ನು ಸಲ್ಲಿಸಿ, ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ  ಉಮೇಶ್ ಎ. ನಾಯ್ಕ್ ಚೇರ್ಕಾಡಿ,  ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ  ಉಮೇಶ್ ನಾಯ್ಕ್ ನೂಜಿನಬೈಲ್ ಮತ್ತು ಶ್ರೀ ಸುಭಾಷ್ ನಾಯ್ಕ್ ಪೆರ್ಡೂರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಶೆಟ್ಟಿ ಹೆರ್ಗ ನಿರೂಪಿಸಿದರು. ಉಮೇಶ್ ಎ. ನಾಯ್ಕ್ ಚೇರ್ಕಾಡಿ ಅವರು ಸ್ವಾಗತಿಸಿದರು. ಸುಭಾಷ್ ನಾಯ್ಕ್ ಅವರು ಧನ್ಯವಾದ ಸಲ್ಲಿಸಿದರು.

Ads on article

Advertise in articles 1

advertising articles 2

Advertise under the article