-->
 ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ


ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನ ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಎದುರು ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂದು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.

ಕೋರಮಂಗಲದ ಕಚೇರಿಯಲ್ಲಿ ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸಿದ್ಧಪಡಿಸುವ ವೇಳೆ ಹೈಡ್ರಾಮಾ ನಡೆಯಿತು. ಯೂತ್ ಕಾಂಗ್ರೆಸ್ ನಾಯಕ ಮನೋಹರ್ ಅವರು, ಡಿಕೆ ಶಿವಕುಮಾರ್ ಮಾತನಾಡುತ್ತಾರೆ, ದಯವಿಟ್ಟು ದುಡುಕಬೇಡಿ ಎಂದು ಮನವೊಲಿಸಲು ಯತ್ನಿಸಿದಾಗ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶಗೊಂಡರು. 

ನನ್ನ ನಿರ್ಧಾರ ಮುಗಿದ ಕಥೆ. ನನ್ನ ಮಗಳು ಅಥವಾ ಕುಟುಂಬದವರ ಬಳಿಯೂ ನಾನು ಈ ಬಗ್ಗೆ ಚರ್ಚಿಸಿಲ್ಲ. 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದು 53 ವರ್ಷಗಳಿಂದ ಪಕ್ಷದಲ್ಲಿದ್ದೇನೆ. 9 ಬಾರಿ ಶಾಸಕನಾಗಿದ್ದೇನೆ. ನಾನಾಗಿಯೇ ಯಾರ ಬಳಿಗೂ ಹೋಗಿ ರಾಜೀನಾಮೆ ಪತ್ರ ಕೊಡುವುದಿಲ್ಲ, ಇಲ್ಲಿಂದಲೇ ಘೋಷಿಸುತ್ತಿದ್ದೇನೆ ಎಂದು ಖಡಕ್‌ ಆಗಿ ಹೇಳಿದ್ದಾರೆ. 

Ads on article

Advertise in articles 1

advertising articles 2

Advertise under the article