-->
ಶಿಥಿಲಗೊಂಡ ಸರ್ಕಾರಿ ಶಾಲೆಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಿ: ಕೆಡಿಪಿ ಸಭೆಯಲ್ಲಿ  ಸೂಚನೆ

ಶಿಥಿಲಗೊಂಡ ಸರ್ಕಾರಿ ಶಾಲೆಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಿ: ಕೆಡಿಪಿ ಸಭೆಯಲ್ಲಿ ಸೂಚನೆ


ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು. ವೈದ್ಯಕೀಯ ಅಗತ್ಯತೆ ಹಿನ್ನೆಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ವಿಳಂಬವಿಲ್ಲದೆ ಶೀಘ್ರವಾಗಿ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳ ನಿರ್ಮಾಣ ಹಾಗೂ ಈಗಿರುವ ಚರಂಡಿಗಳಲ್ಲಿನ ಹುಲ್ಲು ಮತ್ತು ಹೂಳು ತೆರವು ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಅದೇ ರೀತಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಅವುಗಳ ದುರಸ್ತಿಗೆ ಅಗತ್ಯವಾದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಯಿತು. ರೈತರ ಹಿತದೃಷ್ಟಿಯಿಂದ ಮುಂಗಾರು ಹಂಗಾಮಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸುವಂತೆ ಕೃಷಿ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ವಿಜಯ, ತಹಶೀಲ್ದಾರ್ ಗುರುರಾಜ್, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article