-->
ಪರ್ಕಳದ ತಿರುವು ರಸ್ತೆಯಲ್ಲಿ ಲಾರಿ ಪಲ್ಟಿ

ಪರ್ಕಳದ ತಿರುವು ರಸ್ತೆಯಲ್ಲಿ ಲಾರಿ ಪಲ್ಟಿ


ಉಡುಪಿಯ ಪರ್ಕಳ ಕೆಳಪರ್ಕಳದಲ್ಲಿರುವ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಅಪಘಾತದಲ್ಲಿ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಡೀಸೆಲ್ ಸೋರಿಕೆಯಾಗಿರುವುದಾಗಿ ತಿಳಿದುಬಂದಿದೆ.


ಅತ್ರಾಡಿಯಿಂದ ಪೇಪರ್ ಬಾಕ್ಸ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಣಿಪಾಲದಿಂದ ಸಂಚರಿಸುವ ರೆಡಿ ಮಿಕ್ಸ್ ವಾಹನಗಳಿಂದ ರಸ್ತೆಯಲ್ಲಿ ಚೆಲ್ಲಲ್ಪಟ್ಟ ಜಲ್ಲಿ ಮಿಶ್ರಣದಿಂದ ರಸ್ತೆ ಜಾರುವಂತಾಗಿದ್ದು, ಇದರಿಂದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪರ್ಕಳದ ಈ ಭಾಗದಲ್ಲಿ ವಾಹನಗಳು ಆಗಾಗ ಕೆಟ್ಟು ನಿಲ್ಲುವುದು ಹಾಗೂ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದ್ದು, ರಸ್ತೆ ದುಸ್ಥಿತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಸದರು, ಶಾಸಕರು ಹಾಗೂ ಜಿಲ್ಲಾಡಳಿತ ಕೂಡಲೇ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಂಡು ಸುರಕ್ಷಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಪದೇಪದೇ ಸಂಭವಿಸುತ್ತಿರುವ ಅಪಘಾತಗಳಿಂದ ವಾಹನ ಚಾಲಕರು ಮತ್ತು ವಾಹನ ಮಾಲೀಕರು ಭಾರೀ ನಷ್ಟ ಅನುಭವಿಸುತ್ತಿದ್ದು, ರಸ್ತೆಯ ಸಮಗ್ರ ದುರಸ್ತಿ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article