ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿ ಮೃತ್ಯು
Wednesday, June 17, 2026
ಮನೆಯ ಮೇಲ್ಛಾವಣಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮದ ಹಳ್ಳೀಮಠದ ಎಂಬಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮದ ಹಳ್ಳೀಮಠದ ನಿವಾಸಿ ಎಸ್. ರಾಮಚಂದ್ರ ಶಾಸ್ತ್ರಿ (52) ಮೃತಪಟ್ಟವರು. ಇವರು ಮನೆಯ ಮೇಲ್ಛಾವಣಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ಅವರು ಮೃತಪಟ್ಟಿದ್ದಾರೆ.ಅವರು ಪತ್ನಿ, ಓರ್ವ ಪುತ್ರಿ, ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.