-->
ಉಡುಪಿ ಶ್ರೀಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಅನಂತ್ ಅಂಬಾನಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಅನಂತ್ ಅಂಬಾನಿ ಭೇಟಿ


ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.


ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ನೆರವೇರಿಸಿದರು.


ಪೂಜೆ ಬಳಿಕ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ವತಿಯಿಂದ ಗೌರವಪೂರ್ವಕ ಸ್ವಾಗತ ನೀಡಲಾಯಿತು.

Ads on article

Advertise in articles 1

advertising articles 2

Advertise under the article