ಏಕಪೋಷಕ, ಬಡ ವಿದ್ಯಾರ್ಥಿಗಳಿಗೆ ವಂಡಾರಿನ ಶ್ರೀಕೃಷ್ಣಪ್ರಸಾದ್ ಫೌಂಡೇಷನ್ ನೆರವು
ಬ್ರಹ್ಮಾವರ ತಾಲೂಕಿನ ವಂಡಾರಿನಲ್ಲಿರುವ ಶ್ರೀ ಕೃಷ್ಣಪ್ರಸಾದ್ ಕ್ಯಾಶ್ಯೂಸ್ ಪ್ರೈವೆಟ್ ಲಿಮಿಟೆಡ್ ನಡೆಸುವ ಶ್ರೀಕೃಷ್ಣಪ್ರಸಾದ್ ಸಮೂಹ ಸಂಸ್ಥೆಗಳು ಶ್ರೀಕೃಷ್ಣಪ್ರಸಾದ್ ಫೌಂಡೇಷನ್ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಜೂ.14ರಂದು ಸಿಬ್ಬಂದಿಗಳ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯ ಅಭಿವೃದ್ಧಿಗಾಗಿ ಕುಂದಾಪುರದ ಯುವ ಮೆರಿಡಿಯನ್ ನಲ್ಲಿ ಹಮ್ಮಿಕೊಂಡ ‘ಸಂಕಲ್ಪ’ ತರಬೇತಿ ಕಾರ್ಯಕ್ರಮದಲ್ಲಿ ಏಕಪೋಷಕ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಗಳು, ಸಂಸ್ಥೆಯ ಉದ್ಯೋಗಿಗಳ ಮಕ್ಕಳು, ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ವೈದ್ಯಕೀಯ ನೆರವು ವಿತರಿಸಲಾಗುವುದು ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಸುಹಾಸನ ಶೆಟ್ಟಿ ಹಾಗೂ ಸೇಲ್ಸ್ ಜನರಲ್ ಮ್ಯಾನೇಜರ್ ಶ್ರೀನಿವಾಸ್ ತಿಳಿಸಿದ್ದಾರೆ.
ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಈವರೆಗೆ ಇಂಥ 14 ಮಕ್ಕಳನ್ನು ಗುರುತಿಸಿ ಅವರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚುಗಳನ್ನು ಫೌಂಡೇಷನ್ ವತಿಯಿಂದ ನೀಡಲಾಗುತ್ತಿದೆ. ಅಲ್ಲದೇ ಪ್ರತಿವರ್ಷ ಕನಿಷ್ಠ 10 ಮಂದಿ ವಿದ್ಯಾರ್ಥಿಗಳಿಗೆ ಸಂಪೂರ್ಣ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಎಂದರು.
2024ರಲ್ಲಿ ಸ್ಥಾಪಿತವಾದ ಶ್ರೀಕೃಷ್ಣಪ್ರಸಾದ್ ಪೌಂಡೇಷನ್ ಶಿಕ್ಷಣ, ಆರೋಗ್ಯ, ಕಲೆ ಹಾಗೂ ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿ ವೇತನ, ವೈದ್ಯಕೀಯ ಸಹಾಯ, ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹ ಸೇರಿದಂತೆ ವಿವಿಧ ಸಮಾಜ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಹಲವರ ಬದುಕಿಗೆ ಆಶಾಕಿರಣವಾಗಿದೆ ಎಂದರು.ಶ್ರೀಕೃಷ್ಣಪ್ರಸಾದ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಂಪತ್ ಶೆಟ್ಟಿ ಅವರ ನೇತೃತ್ವದಲ್ಲಿ ಉದ್ಯಮದಲ್ಲಿ ಯಶಸ್ಸಿ ನೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಎಚ್‌ಆರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್,ಎಚ್‌ಆರ್ ಮ್ಯಾನೇಜರ್ ವಿನಯಾ ಶೆಟ್ಟಿ ಉಪಸ್ಥಿತರಿದ್ದರು.