ಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ (Video)
Monday, June 22, 2026
ಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.
ಭಾನುವಾರ ಸಂಜೆ ನ್ಯಾಯಾಧೀಶರ ಇ- ಮೇಲಿಗೆ ಬಂದ ಸಂದೇಶದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಹಾಕಲಾಗಿದೆ.. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಉಡುಪಿ ಎಸ್ಪಿಗೆ ದೂರು ನೀಡಿದ್ಡು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಬೆರಳಚ್ಚು ತಂಡ ಆಗಮಿಸಿ ತೀವ್ರ ತಪಾಸಣೆ ನಡೆಸುತ್ತಿದೆ. ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಉಡುಪಿ ನಗರ ಠಾಣೆಯ ಪ್ರಭಾರ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ.
