-->
 ಕಂಟೇನರ್ ಲಾರಿ- ಬೈಕ್ ಅಪಘಾತ: ಸವಾರ ಸಾವು

ಕಂಟೇನರ್ ಲಾರಿ- ಬೈಕ್ ಅಪಘಾತ: ಸವಾರ ಸಾವು


ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.

ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಮೃತ ಬೈಕ್ ಸವಾರ. ಪ್ರದೀಪ್ ಅವರು ತಮ್ಮ ಬೈಕ್ ನಲ್ಲಿ ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ವೇಳೆ ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಢಿಕ್ಕಿ ಹೊಡೆದಿದೆ. ಬೈಕ್ ಸಹಿತ ರಸ್ತೆಗೆ ಬಿದ್ದ ಪ್ರದೀಪ್ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.


Ads on article

Advertise in articles 1

advertising articles 2

Advertise under the article